

ಬಂಕಾಪುರ: ಜಮೀನಿನ ವ್ಯಾಜ್ಯದ ಸಲುವಾಗಿ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಕಲಕಟ್ಟಿಯಲ್ಲಿ ನಡೆದಿದೆ.
ಯಲ್ಲಪ್ಪ ಗುರುಲಿಂಗಪ್ಪ ಕಾಡಶೆಟ್ಟಿಹಳ್ಳಿ (42) ಮೃತ ವ್ಯಕ್ತಿ.
ಈತ ತನ್ನ ಜಮೀನಿನ ವ್ಯಾಜ್ಯದ ಸಲುವಾಗಿ ವಿವಿಧ ಸಂಘ-ಸಂಸ್ಥೆಗಳಲ್ಲಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದನು. ಆದರೆ, ಸಾಲ ಮರು ತೀರಿಸಲಾಗದೆ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.