

ಬೆಳ್ತಂಗಡಿ: ಕಲ್ಮಂಜದಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಮೃತಪಟ್ಟವರು. ಕೃಷ್ಣಪ್ಪ ಪೂಜಾರಿಯ ಮೇಸ್ತ್ರಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಕಾಣೆಯಾಗಿದ್ದರು. ಇವರು ನಾಪತ್ತೆಯಾಗಿದ್ದ ಬಗ್ಗೆ ಮನೆ ಮಂದಿ ಸುತ್ತಮುತ್ತ ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ ಆದರೆ ಪತ್ತೆಯಾಗಿರಲಿಲ್ಲ. ಬುಧವಾರ ಸಂಜೆ ಮೃತ ದೇಹ ಬಾವಿಯಲ್ಲಿ ತೇಲಾಡುತ್ತಿರುವುದು ಮನೆಯವರಿಗೆ ಕಂಡಿದೆ. ತಕ್ಷಣ ಬಾವಿಯಿಂದ ಮೃತದೇಹ ತೆಗೆಯಲಾಗಿದ್ದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.