ವೇಣೂರಿನಲ್ಲಿ ಕೂಲಿಕಾರ್ಮಿಕನ ಹತ್ಯೆ

crime
Published on

ಬೆಳ್ತಂಗಡಿ: ತಾಲೂಕಿನ ವೇಣೂರಿನಲ್ಲಿ ಕೂಲಿ ಕಾರ್ಮಿಕರೊಬ್ಬರನ್ನು ತಲವಾರಿನಿಂದ ಕಡಿದು ಹತ್ಯೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

ಕರಿಮಣೇಲು ನಿವಾಸಿ ಸಂಜೀವ ಶೆಟ್ಟಿ(60) ಹತ್ಯೆಯಾದವರು. ಊರಿನ ಸಂಬಂಧಿಯೇ ಆಗಿರುವ ಶ್ರೀಶ ಎಂಬಾತ ಕೊಲೆ ಆರೋಪಿ.

ಸಂಜೀವ ಶೆಟ್ಟಿ ಪ್ರತಿದಿನ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಶುಕ್ರವಾರ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಸಹಕೆಲಸಗಾರರು ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಗೊತ್ತಾಗಿದೆ. ಸಂಜೀವ ಶೆಟ್ಟಿ ಮನೆಯಲ್ಲಿ ಒಬ್ಬರೇ ಇದ್ದು, ಎಷ್ಟು ಹೊತ್ತಿಗೆ ಕೊಲೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಘಟನೆಗೆ ವೈಯಕ್ತಿಕ ಕಾರಣಗಳಿರಬಹುದು ಎಂದು ಶಂಕಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net