ತಾನೇ ಸಾಕಿದ್ದ ಹಸುವಿಗೆ ಬಲಿಯಾದ ರೈತ, ಹೊಟ್ಟೆಯ ಭಾಗಕ್ಕೆ ಬಲವಾದ ತಿವಿತ!

Farmer
Published on

ಮೈಸೂರು: ಇದೊಂಥರ ವಿಚಿತ್ರ ಪ್ರಕರಣ. ಯಾಕೆಂದರೆ ಕಾಡುಪ್ರಾಣಿಗಳಿಗೆ ಮನುಷ್ಯರು ಬಲಿಯಾಗುವುದು ಹೊಸದೇನಲ್ಲ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಸಾಕುಪ್ರಾಣಿಗೆ ಬಲಿಯಾಗಿದ್ದಾರೆ. ಅದರಲ್ಲೂ ಅವರು ತಾವೇ ಸಾಕಿದ್ದ ಹಸುವಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ನಂಜನಗೂಡು ತಾಲೂಕಿನ ಕೆ.ಆರ್. ಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ರೈತ ಸಿದ್ದೇಗೌಡ (69) ಎಂಬವರು ಮೃತಪಟ್ಟಿದ್ದಾರೆ. ಇವರು ತಮ್ಮ ಹಸುವನ್ನು ಮೇಯಿಸುತ್ತಿದ್ದ ವೇಳೆ ಅದು ಇವರ ಹೊಟ್ಟೆಯ ಭಾಗಕ್ಕೆ ಬಲವಾಗಿ ತಿವಿದಿದೆ.

ಹಸುವಿನ ತಿವಿತದಿಂದ ಗಂಭೀರವಾಗಿ ಗಾಯಗೊಂಡ ಇವರನ್ನು ತಕ್ಷಣವೇ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿತ್ತು. ಅದಾಗ್ಯೂ ಇವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net