ಕೊಲೆಗೆ ಯತ್ನಿಸಿದವಗೆ 4 ವರ್ಷ ಜೈಲು ಶಿಕ್ಷೆ

14 smg malatesh
Published on

ಶಿವಮೊಗ್ಗ: ವೈಯಕ್ತಿಕ ದ್ವೇಷದಿಂದ ವ್ಯಕ್ತಿಯೊಬ್ಬರ ಕುತ್ತಿಗೆ ಕೊಯ್ದು ಕೊಲೆಗೆ ಯತ್ನಿಸಿದ್ದವನಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.

ಶಿರಾಳಕೊಪ್ಪ ಪಟ್ಟಣದ ಮಠದ ಗದ್ದೆ ನಿವಾಸಿ ಕೆ.ಮಾಲತೇಶ್ (34) ಶಿಕ್ಷೆಗೆ ಒಳಗಾದವ. ಈತ 2020ರ ಮಾ.21ರಂದು ಮಠದ ಗದ್ದೆಯಲ್ಲಿ ಶಿಕಾರಿಪುರ ತಾಲೂಕಿನ ಬಿಳಕಿ ಗ್ರಾಮದ ಕೃಷ್ಣಪ್ಪ (48) ಅವರನ್ನು ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕತ್ತಿಯಿಂದ ಕುತ್ತಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಬಗ್ಗೆ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ವಸಂತ್ ಅವರು ಮಾಲತೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ದಂಡ ಪಾತಿಸಲು ವಿಫಲನಾದರೆ 6 ತಿಂಗಳುನ ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಸುರೇಶ್‌ಕುಮಾರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net