ಎನ್ನೆಸ್ಸೆಸ್ಸ್‌ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವೃದ್ಧಿ

nss
ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ಸ್ ಶಿಬಿರವನ್ನು ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಧಾನ ಅರ್ಚಕ ಶ್ರೀಪತಿ ಅಡಿಗ ಉದ್ಘಾಟಿಸಿದರು.
Published on

ಕೊಕ್ಕರ್ಣೆ: ಎನ್ನೆಸ್ಸೆಸ್ಸ್ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಕಲಿತ ಅಂಶಗಳನ್ನು ಜೀವನದುದ್ದಕ್ಕೂ ಅಳವಡಿಸಿ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು ಶಿಬಿರಾರ್ಥಿಗಳ ಜವಾಬ್ದಾರಿ ಎಂದು ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಧಾನ ಅರ್ಚಕ ಶ್ರೀಪತಿ ಅಡಿಗ ಹೇಳಿದರು.

ಮಂದಾರ್ತಿಯಲ್ಲಿ ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಯಮಿ ಎಚ್.ವಿಠಲ ಶೆಟ್ಟಿ ಶೇಡಿಕೊಡ್ಲು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲೇ ಉತ್ತಮ ಸಂಸ್ಕಾರ ಕಲಿಯುವುದು ಅಗತ್ಯ. ಇದರಿಂದ ಬದುಕುವ ಕಲೆ ರೂಪುಗೊಳ್ಳುವುದು. ಶಿಸ್ತಿನ ನಡವಳಿಕೆ ಜಗತ್ತನ್ನೇ ಗೆಲ್ಲುವ ಆತ್ಮವಿಶ್ವಾಸ ಬೆಳೆಸಬಲ್ಲದು ಎಂದರು.

ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ, ಹೆಗ್ಗುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಕೃಷ್ಣ, ಉದಯ ಭಾಸ್ಕರ ಶೆಟ್ಟಿ, ಶಂಭುಶಂಕರ ರಾವ್ ಉಪಸ್ಥಿತರಿದ್ದರು. ಪ್ರಾಂಶುಪಾಲ ರವೀಂದ್ರ ಉಪಾಧ್ಯ ಸ್ವಾಗತಿಸಿದರು. ಸವಿತಾ ಎರ್ಮಾಳ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net