ಯಕ್ಷಗಾನ ಕಲೆಯಿಂದ ವ್ಯಕ್ತಿತ್ವ: ಜಯರಾಮ ಪಾಟಾಳಿ ಪಡುಮಲೆ ಅನಿಸಿಕೆ

Bdk_Yakshagana art
Published on

ಮಧೂರು: ಯಕ್ಷಗಾನ ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಸ್ವತಂತ್ರವಾದ ಶಾಸ್ತ್ರೀಯ ಕಲೆ. ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದ ಯಕ್ಷಗಾನ ಕಲೆಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಯಕ್ಷಗಾನದ ಕೊಡುಗೆ ಅಪಾರವಾಗಿದೆ ಎಂದು ಯಕ್ಷಗಾನ ಗುರು ಜಯರಾಮ ಪಾಟಾಳಿ ಪಡುಮಲೆ ತಿಳಿಸಿದರು.

ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ನೇತೃತ್ವದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಕಾರದೊಂದಿಗೆ ನಡೆಯುವ ಯಕ್ಷಗಾನ ತರಬೇತಿ ಶಿಬಿರದ ಶನಿವಾರ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಕ್ಷಗಾನ ಕಲಾವಿದ ಪುರುಷೋತ್ತಮ ಭಟ್ ಉದ್ಘಾಟಿಸಿದರು. ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಯಕ್ಷಗಾನ ಕಲಾವಿದೆ ಪ್ರಮೀಳ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net