ಶಾಲೆಗೆ ಗೈರಾಗುವ ಮಕ್ಕಳ ಮನವೊಲಿಸಿ

16 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆ ಹಾಗೂ ಕಲಿಕಾ ಗುಣಮಟ್ಟ ಹೆಚ್ಚಿಸಲು ಮಿಷನ್ ವಿದ್ಯಾಕಾಶಿ ಯೋಜನೆಯಡಿ ಗೈರಾಗುವ ಮಕ್ಕಳ ಮನೆಗೆ ಭೇಟಿ ನೀಡಿ ಮನವೊಲಿಸುವ ಕಾರ್ಯದಲ್ಲಿ ಸಮುದಾಯದ ಸಹಭಾಗಿತ್ವ ಪ್ರಮುಖ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ತಮ್ಮ ಕಚೇರಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಮುಖರು ಹಾಗೂ ವಿವಿಧ ಸರ್ಕಾರಿ ಸಮಿತಿಗಳ ಸದಸ್ಯರ, ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಶೇಕಡಾ ಉತ್ತೀರ್ಣ ಪ್ರಮಾಣ ಕಡಿಮೆಯಾಗಿದೆ. ಶೈಕ್ಷಣಿಕ ಪ್ರಗತಿಯಲ್ಲಿ ಸಮುದಾಯಗಳ ಪ್ರಮುಖರ ಹಾಗೂ ಹಿರಿಯರ ಸಹಕಾರ ಅಗತ್ಯ. ಶಿಕ್ಷಕರು ನಿಗದಿತ ಅವಽಗೆ ಶಾಲೆಯಲ್ಲಿದ್ದು, ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸುವಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಪಿ. ಸ್ವಾಗತಿಸಿದರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಮಕ್ಕಳ ದಾಖಲಾತಿ, ಕಲಿಕೆ ಮತ್ತು ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಉಪ ಸಮನ್ವಯ ಅಽಕಾರಿ ಡಾ. ರೇಣುಕಾ ಅಮಲಜೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮುದಾಯಗಳ ಮುಖಂಡರಾದ ಎಂ. ಅರವಿಂದ, ಪ್ರೇಮನಾಥ ಚಿಕ್ಕತುಂಬಳ, ಲಕ್ಷ್ಮಣ ಬಕ್ಕಾಯಿ, ಸುರೇಶ ಮಾಕಪ್ಪನವರ, ಕಲ್ಮೇಶ ಹಾದಿಮನಿ, ಅಶೋಕ ದೊಡ್ಡಮನಿ, ಮೋಹನ ಹಿರೇಮನಿ, ಯಲ್ಲಪ್ಪ ಮಂಟೂರ, ಹನುಮಂತಪ್ಪ ಚಲವಾದಿ, ಮಂಜುನಾಥ ಸವಣೂರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net