

ಮಂಡ್ಯ: ಪಿಇಎಸ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಮಾ.3ರಂದು ಪಿಇಎಸ್ ನೆಕ್ಸ್ಟ್ ಆವಿಷ್ಕಾರ ಮತ್ತು ಸಂವರ್ಧನಾ ಕೇಂದ್ರ ಹಾಗೂ ಎಲೆಕ್ಟ್ರಿಕ್ ವಾಹನಗಳ ಉತ್ಕೃಷ್ಟತಾ ಕೇಂದ್ರಗಳ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಲ್.ಮುರುಳಿಕೃಷ್ಣ ತಿಳಿಸಿದರು.
ಅಂದು ಮಧ್ಯಾಹ್ನ 3ಗಂಟೆಗೆ ಕಾಲೇಜಿನ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ವಹಿಸುವರು. ವಿಶೇಷ ಆಹ್ವಾನಿತರಾಗಿ ಬಿಜಿಎಸ್ ಮತ್ತು ಎಸ್‌ಜಿಬಿ ಸಮೂಹ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ.ಪುಟ್ಟರಾಜು ಮತ್ತು ಪಿಇಎಟಿ ಸಂಸ್ಥೆಯ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಉಪ ಪ್ರಾಂಶುಪಾಲ ಡಾ.ಎಸ್.ವಿನಯ್, ಡಾ.ಕೆ.ಎಂ.ಮಹೇಶ್‌ಕುಮಾರ್, ಡಾ.ಕೋದಂಡರಾಮ ಇದ್ದರು.