ಕಾಂಗ್ರೆಸ್ ವಜಾಗೊಳಿಸಲು ಆಗ್ರಹಿಸಿ ಮನವಿ

30 MBL PHOTO 3
ರಾಜ್ಯದಲ್ಲಿನ ಭ್ರಷ್ಟ, ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳದಲ್ಲಿ ತಾಲೂಕು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ತಾಲೂಕ ಅಧ್ಯಕ್ಷ ಪಿ.ಎನ. ಹವಾಲ್ದಾರ್, ಮುಂಡರಾದ ಬಸನಗೌಡ ಪಾಟೀಲ (ಹಿರೇಮುರಾಳ), ಸೈಯದ್ ಸಾತಿಹಾಳ ಇತರರಿದ್ದರು.
Published on

ಮುದ್ದೇಬಿಹಾಳ: ರಾಜ್ಯದಲ್ಲಿನ ಭ್ರಷ್ಟ, ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳು ಗತಿಸಿದರೂ ಒಂದೂ ಜನಪರ ಯೋಜನೆ ಅನುಷ್ಠಾನಗೊಳಿಸಿಲ್ಲ. ವಾಲ್ಮೀಕಿ, ವಸತಿ ನಿಗಮ, ಅಬಕಾರಿ ಇಲಾಖೆ ಹಲವಾರು ಇಲಾಖೆಗಳಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಗ್ಯಾಂರಂಟಿ ಯೋಜನೆಗಳ ಹೆಸರಲ್ಲಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಸರ್ಕಾರದ ಖಜಾನೆ ಲೂಟಿ ಮಾಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಆದ್ದರಿಂದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ತಾಲೂಕ ಅಧ್ಯಕ್ಷ ಪಿ.ಎನ. ಹವಾಲ್ದಾರ್, ಮುಂಡರಾದ ಬಸನಗೌಡ ಪಾಟೀಲ (ಹಿರೇಮುರಾಳ), ಸೈಯದ್ ಸಾತಿಹಾಳ, ಬಸವಂತ್ರಾಯ ದೇಸಾಯಿ, ಲಾಳೇಮಶಾಕ್ ನಾಯ್ಕೋಡಿ, ಅಜರುದ್ದೀನ್ ಮುಲ್ಲಾ, ಅಬ್ದುಲ್ ಅಜೀಜ್, ಮೋತಿಲಾಲ ಮ್ಯಾಗೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net