

ಮಂಡ್ಯ: ಗೌರವಧನ ಬಿಡುಗಡೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಪ್ರತಿಭಟಿಸಲಾಯಿತು.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನ ಫೆಬ್ರವರಿ ತಿಂಗಳ ಬಾಕಿ ಒಳಗೊಂಡಂತೆ ಮೂರು ತಿಂಗಳ ಗೌರವಧನ ವೇತನ ಪಾವತಿ ಮಾಡಿರುವುದಿಲ್ಲ. ಇದರಿಂದ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟಗಳಿಗೆ ಒಳಗಾಗಿದ್ದಾರೆ. ಬೆಲೆ ಏರಿಕೆಯಲ್ಲಿ ಕುಟುಂಬ ನಿರ್ವಹಣೆಗೂ ಪರದಾಡುವಂತಾಗಿದೆ. ಕೂಡಲೇ ಗೌರವಧನ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ನಾಗರಾಜು, ಕೆ.ಸಿ.ವಿದ್ಯಾ, ಎಂ.ಪಿ.ಪ್ರಭಾ, ವಿದ್ಯಾಶ್ರೀ ಇತರರಿದ್ದರು.