ಸೇವಾ ಜೇಷ್ಠ್ಠತೆ ಆಧಾರದ ಮೇಲೆ ಬಡ್ತಿ

hrr
Published on

ಹರಿಹರ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹರಿಹರ ತಾಲೂಕು ಘಟಕದಿಂದ ಸೇವಾ ಜೇಷ್ಠ್ಠತೆ ಆಧಾರದ ಮೇಲೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ತಹಸೀಲ್ದಾರ್ ಗುರು ಬಸವರಾಜ್‌ಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಪದಾಧಿಕಾರಿಗಳು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

2017ರ ವರೆಗೆ ನೇಮಕವಾದ ಶಿಕ್ಷಕರನ್ನು 1ರಿಂದ 7ನೇ ತರಗತಿ ಶಿಕ್ಷಕರೆಂದು ಪರಿಗಣಿಸಬೇಕು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮೀಕರಿಸಬೇಕು.

ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು 1ರಿಂದ 8ನೇ ತರಗತಿಗೆ ನೇಮಕಾತಿಯಾದ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಆರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕು, 2016ಕ್ಕಿಂತ ಮೊದಲು ನೇಮಕಾತಿಯಾದ ಸರ್ವರಿಗೂ ಈ ಹಿಂದಿನಂತೆ ಪ್ರೌಢಶಾಲೆಗಳಿಗೆ ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ನೀಡುವುದು ಹಾಗೂ ಮುಖ್ಯಗುರುಗಳ ಹುದ್ದೆಗಳಿಗೆ ಸೇವಾ ಜೇಷ್ಠ್ಠತೆಯಂತೆ ಬಡ್ತಿ ನೀಡುವಂತೆ ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಶರಣಕುಮಾರ್, ಉಪಾಧ್ಯಕ್ಷ ಕರಿಬಸಪ್ಪ ಕುಪ್ಪೇಲೂರು, ಸಂಘಟನಾ ಕಾರ್ಯದರ್ಶಿ ಸುಮಂಗಲಾ, ಮಂಜಪ್ಪ ಬಿದರಿ, ರುದ್ರಪ್ಪ, ಬಿ.ಎನ್. ವೀರಪ್ಪ, ತಿಪ್ಪೇಸ್ವಾಮಿ, ಚನ್ನಕೇಶವ ಕಟ್ಟೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net