ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ಷುಲ್ಲಕ ರಾಜಕಾರಣ

Joshi 1111
Published on

ಹುಬ್ಬಳ್ಳಿ : ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ನಡೆಸಿ ನ್ಯಾಯ ಕೊಡಿಸಲು ಮುಂದಾಗದೇ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅತ್ಯಂತ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಏಕೆ ತಕ್ಷಣಕ್ಕೆ ಎಫ್​ಐಆರ್ ದಾಖಲಿಸಲಿಲ್ಲ? ಆತನನ್ನು ಬಂದಿಸಲಿಲ್ಲ? ಎಂದು ಪ್ರಶ್ನಿಸಿದರು.

ಏಪ್ರಿಲ್ 21ರಂದೇ ಪ್ರಜ್ವಲ್ ರೇವಣ್ಣ ವಿಡಿಯೋಗಳು ಹರಿದಾಡಿವೆ. 22ಕ್ಕೆ ಅವರ ಮೇಲೆ ಏಕೆ ಪ್ರಕರಣ ದಾಖಲಿಸಲಿಲ್ಲ? ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ಅವರಿಗೆ ನೈತಿಕತೆ ಇದ್ದರೆ ಉತ್ತರಿಸಲಿ ಎಂದು ಜೋಶಿ ಸವಾಲು ಹಾಕಿದರು.

ರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ರಾಜಕೀಯ ಮಾಡಲು ಹೊರಟಿದೆ. ಉನ್ನತ ತನಿಖೆ, ನ್ಯಾಯ ಕಲ್ಪಿಸುವ ಯೋಚನೆಯೇ ಇಲ್ಲ ಎಂದು ಆರೋಪಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ನಡೆಸುವುದಲ್ಲದೆ, ಕಠಿಣ ಶಿಕ್ಷೆ ಆಗಲೇಬೇಕು. ಆದರೆ, ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೇ, ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್​ಗೆ ತನಿಖೆಗಿಂತ, ನ್ಯಾಯಕ್ಕಿಂತ ಹೆಚ್ಚಾಗಿ ರಾಜಕಾರಣ ಬೇಕಾಗಿದೆ. ರೇವಣ್ಣ ಅವರ ಪ್ರಕರಣದಲ್ಲಿ ಸರ್ಕಾರ ತಪ್ಪು ಮಾಡುತ್ತಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net