ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಆಗ್ರಹ - ಹನುಮಂತ ಕೊಂಗಾಲಿ

414
Published on

ಬೆಳಗಾವಿ: ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪಿಎಫ್‌ಐ ಸಂಘಟನೆಯನ್ನು ಕೂಡಲೇ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಬಿಜೆಪಿ ಮಹಾನಗರ ವಕ್ತಾರ ಹನುಮಂತ ಕೊಂಗಾಲಿ ಆಗ್ರಹಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ವಿದೇಶಕ್ಕೆ ಪರಾರಿಯಾಗಲು ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಪಿಎಫ್‌ಐ ಮುಖಂಡ ರವೂಫ್ ಶರೀಫ್ ಬಂಧನ ಖಂಡಿಸಿ ಪಿಎಫ್‌ಐ ಸಂಘಟನೆಯು ಮಂಗಳೂರಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರ ಸಂಸದೀಯ ಕಚೇರಿ ಮುಂದೆ ನಡೆಸಿರುವ ಪ್ರತಿಭಟನೆಯನ್ನು ಬಿಜೆಪಿ ಮಹಾನಗರ ಘಟಕ ತೀವ್ರವಾಗಿ ಖಂಡಿಸಿದೆ.

ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶಿಕ್ಷಾರ್ಹರಾದ ಅಪರಾಧಿ ಹಿನ್ನೆಲೆಯ ವ್ಯಕ್ತಿಗಳು ಮತ್ತು ಸಂಘಟನೆಗಳು ದೇಶದ ಹಿತದೃಷ್ಟಿಯಿಂದ ಜಾರಿ ನಿರ್ದೇಶನಾಲಯ ಕೈಗೊಂಡಿರುವ ತನಿಖೆಯ ಕ್ರಮಗಳ ವಿರುದ್ಧ ಪ್ರತಿಭಟಿಸಿದ ಎಲ್ಲ ವ್ಯಕ್ತಿಗಳು ಶಿಕ್ಷಾರ್ಹರು ಮತ್ತು ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪಿಎಫ್‌ಐ ಸಂಘಟನೆಯ ತಥಾಕಥಿತ ಅಧ್ಯಕ್ಷ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಹಾಗಾಗಿ ಪಿಎಫ್‌ಐ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net