ದಿಢೀರ್ ರಸ್ತೆ ತಡೆ ಮಾಡಿದ ಪಿಎಫ್ ಐ ಕಾರ್ಯಕರ್ತರ ಮೇಲೆ‌ ಶಿವಮೊಗ್ಗದಲ್ಲಿ ಲಾಠಿ ಚಾರ್ಜ್

Screenshot_2020-01-02-20-22-22-0512839987.png
Published on

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು.


ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲವೆಂದು ಆಗ್ರಹಿಸಿ ಕಾರ್ಯಕರ್ತರು ಅಮೀರ್ ಅಹಮ್ಮದ್ ವೃತ್ತದ ಬಳಿ ಬಿ.ಎಚ್.ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು.


ಘಟನೆ ವಿವರ: ಪೌರತ್ವ ಕಾಯ್ದೆ ವಿರುದ್ಧ ಜ.3ರಂದು ನಗರದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬೇಕೆಂದು ವಿವಿಧ ಮುಸ್ಲಿಂ ಸಂಘಟನೆಗಳು ಜಿಲ್ಲಾಡಳಿತಕ್ಕೆ ಅನುಮತಿ ಕೋರಿದ್ದವು. ಆದರೆ ಪ್ರತಿಭಟನೆಗೆ ಅವಕಾಶ ನೀಡದೆ ಇರುವ ಕಾರಣ ರಸ್ತೆ ತಡೆ ನಡೆಸಿದ್ದರು. ಸ್ಥಳದಲ್ಲಿದ್ದ ಪೊಲೀಸರು ರಸ್ತೆ ತಡೆ ಕೈಬಿಡುವಂತೆ ಪ್ರತಿಭಟನಾಕಾರ ಮನವೊಲಿಸಲು ಯತ್ನಿಸಿದರು. ಆದರೆ ಕಾರ್ಯಕರ್ತರು ಪ್ರತಿಭಟನೆ ಕೈಬಿಡದ ಹಿನ್ನಲೆಯಲ್ಲಿ ಲಾಠಿ ಪ್ರಹಾರ ನಡೆಸಿ ಹಲವರನ್ನು ವಶಕ್ಕೆ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net