ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪಿಜಿ ಕೋರ್ಸ್ ಪ್ರಾರಂಭಿಸುತ್ತೇವೆ: ಸಚಿವ ಡಾ. ಜಿ.ಪರಮೇಶ್ವರ

PG_Centre
Published on

ತುಮಕೂರು: ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮುಂದಿನ ದಿನಗಳಲ್ಲಿ ಸ್ಥಾಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬುಧವಾರ ಟ್ರಾಮಾ ಕೇರ್ ಸೆಂಟರ್‌ಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಿಜಿ ಕೋರ್ಸ್‌ಗಳನ್ನು ಪ್ರಾರಂಭಿಸುವುದಕ್ಕೆ ಕ್ರಮವಹಿಸಲಾಗುವುದು ಎಂದರು.

ಮಾಜಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಕನಸಿನ ಕೂಸಾದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಸ್ಥೆ ಸ್ಥಾಪನೆಗೆ 2022ರ ಬಜೆಟ್‌ನಲ್ಲಿ ಒಪ್ಪಿಗೆ ಪಡೆಯಲಾಗಿತ್ತು. ಇದೀಗ ಪರಂ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಪಿಜಿ ಕೋರ್ಸ್ ಅನ್ನು ತೆರೆಯುವ ಭರವಸೆ ನೀಡಿದರು.

112 ಡೆಂೆ ಪ್ರಕರಣ: ಜಿಲ್ಲೆಯಲ್ಲಿ 112 ಡೆಂೆ ಪ್ರಕರಣಗಳು ವರದಿಯಾಗಿದ್ದು ಡೆಂೆ ಹಾಗೂ ಮಲೇರಿಯಾ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಲಿದ್ದಾರೆ. ನಗರದಲ್ಲಿ ಈ ಸಂಬಂಧ ಪಾಲಿಕೆ ಆಯುಕ್ತರು, ಕಾರ್ಪೋರೇಟರ್‌ಗಳು ಅಗತ್ಯ ಎಚ್ಚರಿಕೆ ವಹಿಸುವರು ಎಂದು ಪರಂ ಪ್ರತಿಕ್ರಿಯಿಸಿದರು.

ಜೆಸಿಎಂ ಈಗಿಲ್ಲ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿ ಅವರು ಜಯದೇವ ಹೃದ್ರೋಗ ಆಸ್ಪತ್ರೆ ಪ್ರಾದೇಶಿಕ ಕೇಂದ್ರ ಸ್ಥಾಪಿಸುವ ಭರವಸೆ ನೀಡಿದ್ದರು ಎಂಬ ಪತ್ರಕರ್ತರ ಪ್ರಶ್ನೆಗೆ ಈಗ ಅವರಿಲ್ಲ ಎಂದಷ್ಟೇ ಪರಂ ಜಾರಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net