

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಲ್ಲದೇ 9 ಲಕ್ಷ ರೂ. ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ನೀಡಿದ ದೂರಿನ ಮೇಲೆ ಬೆಂಗಳೂರಿನ ಭರತ್‌ಗೌಡ, ಆತನ ಪಾಲಕರಾದ ಸುರೇಶ್, ಅಂಕಿತಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಗರದ ವಿ.ವಿ. ಮೊಹಲ್ಲಾದಲ್ಲಿ ಪಿಜಿ ನಡೆಸುತ್ತಿದ್ದ ನನ್ನನ್ನು ಭರತ್‌ಗೌಡ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದರು. ಅಲ್ಲದೇ ನನ್ನಿಂದ 9 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ. ಇದಕ್ಕೆ ಪಾಲಕರು ಸಹ ಕುಮ್ಮಕ್ಕು ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.