ಪುಲಕೇಶಿಗೆ ಪಿಎಚ್​.ಡಿ ಪ್ರದಾನ

wp-1745506308276.jpg
Published on

ಹುಬ್ಬಳ್ಳಿ: ಇಲ್ಲಿಯ ಗಂಗಾಧರ ನಗರ ಶ್ರೀ ಶರಣ ನುಲಿಯ ಚಂದಯ್ಯ ಡಾ. ಬಿ.ಆರ್. ಅಂಬೇಡ್ಕರ್ ಪದವಿ ಮಹಾವಿದ್ಯಾಲಯ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುಲಕೇಶಿ ಭೀಮಪ್ಪ ಕಾಮಣ್ಣವರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್.ಡಿ ಪ್ರದಾನ ಮಾಡಿದೆ.

'ಕುಂದೂರು ಐನ್ನೂರರ ಸಾಂಸ್ಕೃತಿಕ ಅಧ್ಯಯನ' ಎಂಬ ವಿಷಯ ಕುರಿತು ಪುಲಿಕೇಶಿ ಇವರು ಮಹಾಪ್ರಬಂಧ ಮಂಡಿಸಿದ್ದರು. ಇವರಿಗೆ ಕವಿವಿ ಪ್ರಾಚಿನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಜಿ. ಚಲವಾದಿ ಅವರು ಮಾರ್ಗದರ್ಶನ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net