

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಂಶೋಧನಾ ಅಭ್ಯರ್ಥಿ ಸುಮಾ ಸಾವಂತ ವಸಂತ ಅವರು ನಗರದ ಜೆಎಸ್‌ಎಸ್ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಮೂಲಕ ಕನ್ನಡ ವಿಷಯದಲ್ಲಿ `ಹೊಸ ತಲೆಮಾರಿನ ಕನ್ನಡ ಕಾವ್ಯದಲ್ಲಿ ಸ್ತ್ರೀ ನಿರ್ವಚನ' ವಿಷಯ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡಿಸಿ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ. ಅವರಿಗೆ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ವೈ.ಎಂ. ಭಜಂತ್ರಿ ಮಾರ್ಗದರ್ಶಕರಾಗಿದ್ದರು.