ನ.04 ರಂದು ಫೋನ್ ಇನ್ ಕಾರ್ಯಕ್ರಮ

Published on

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಕುಂದು ಕೊರತೆಗಳನ್ನು ಆಲಿಸಲು ನ. 04 ರಂದು ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅತಿಳಿಸಿದ್ದಾರೆ. ಬಸ್ ಸೌಕರ್ಯದ ಕುರಿತು ಕುಂದುಕೊರತೆ, ಸಮಸ್ಯೆಗಳಿದ್ದಲ್ಲಿ ಮೊ.7760992152, 6366423885 ಗೆ ಕರೆ ಮಾಡಿ ತಿಳಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net