ಮೇ 5 ರಂದು ನೇರ ಫೋನ್ ಇನ್ ಕಾರ್ಯಕ್ರಮ

Published on

ಯಾದಗಿರಿ : 2025ರ ಮೇ 5 ರಂದು ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಯಾದಗಿರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ಸುನೀಲ್ ಕುಮಾರ ಚಂಡ್ರಗಿ ಅವರು ತಿಳಿಸಿದ್ದಾರೆ.

ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಂಟಾಗುವ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರತಿ ತಿಂಗಳು ಮೊದಲನೇ ಸೋಮವಾರ ನೇರ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೇಂದ್ರ ಕಛೇರಿ ವ್ಯವಸ್ಥಾಪಕರು ನಿರ್ದೇಶಕರು ಅವರು ಸೂಚಿಸಿದೆ.

ಯಾದಗಿರಿ ಜಿಲ್ಲೆಯ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇರುವ ಸಾರಿಗೆ ಸಮಸ್ಯೆಗಳ ಕುರಿತು ಯಾದಗಿರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗದಿಂದ 2025ರ ಮೇ 5ರ ಸೋಮವಾರ ರಂದು ಮಧ್ಯಾಹ್ನ 3.30 ರಿಂದ ಸಂಜೆ 5.30 ಗಂಟೆಯ ವರೆಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಯಾದಗಿರಿ ಜಿಲ್ಲೆಯ ಸಾರ್ವಜನಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರವಾಣಿ ಸಂಖ್ಯೆ 6366423882ಗೆ ಕರೆ ಮಾಡಿ ತಮ್ಮ ಸಾರಿಗೆ ವ್ಯವಸ್ಥೆ ಕುರಿತು ಇರುವ ಸಮಸ್ಯೆಗಳನ್ನು ತಿಳಿಸಿ ಪರಿಹಾರ ಕಂಡುಕೊಳ್ಳಬೇಕು. ಅಂದು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಯಾದಗಿರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿಗಳು ಜಿಲ್ಲೆಯ ಸಾರಿಗೆ ಸಮಸ್ಯೆಗಳ ಕುರಿತು ಸಾರ್ವಜನಿಕರೊಂದಿಗೆ ನೇರವಾಗಿ ಮಾತನಾಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net