ಕಿತ್ತೂರು ಉತ್ಸವದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಛಾಯಾಚಿತ್ರ ಪ್ರದರ್ಶನ

Screenshot_2023-10-23-15-16-44-67.jpg
Published on

ಬೆಳಗಾವಿ: ಕೇಂದ್ರ ಸಂವಹನ ಇಲಾಖೆ, ಧಾರವಾಡ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ವತಿಯಿಂದ ಕಿತ್ತೂರು ಉತ್ಸವದ ಅಂಗವಾಗಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.

ಇಂದು ಬೆಳಗಾವಿ ಜಿಲ್ಲೆ ಕಿತ್ತೂರು ಚೆನ್ನಮ್ಮ ಉತ್ಸವ ಅಂಗವಾಗ ಸ್ವಚ್ಚ ಭಾರತ 3.0, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಹಾಗೂ ಕೇಂದ್ರ ಸರ್ಕಾರದ ಇತರ ಯೋಜನೆಗಳ ಕುರಿತ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಸ್ಥಳೀಯ ಶಾಸಕರಾದ ಬಾಬಾಸಾಹೇಬ ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಸಿ.ಇ.ಓ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಜಿಲ್ಲಾ ವಾರ್ತಾಧಿಕಾರಿ ಗುರುನಾಥ ಕಡಬೂರ ಮತ್ತು ಕೇಂದ್ರ ಸಂವಹನ ಇಲಾಖೆಯ ಮುರಳಿಧರ ಕಾರಭಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

ಮೂರು ದಿನಗಳ ಕಾಲ ಪ್ರದರ್ಶನ ನಡೆಯಲಿದ್ದು, ಕೇಂದ್ರ ಸರಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರು ಮಾಹಿತಿಯನ್ನು ಪಡೆಯಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net