ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾರಾಜಿಸುತ್ತಿದೆ ಬಿಜೆಪಿ ಶಾಸಕರ ಫೋಟೋ..!

Photo of BJP leaders at Congress event
Published on

ಮೈಸೂರು: ನಗರದ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಮಾ.27 ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಮುಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ವಿ. ರಾಜೀವ್ ಹಾಗೂ ಬೆಂಬಲಿಗರ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದು, ಈ ಕಾರ್ಯಕ್ರಮದಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಬೃಹತ್ ಭಾವಚಿತ್ರಗಳು ರಾರಾಜಿಸುತ್ತಿದೆ.

ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಚರ್ಚೆಗಳು ಸಾಕಷ್ಟು ಸಮಯದಿಂದ ನಡೆಯುತ್ತಿದೆ. ಇದೀಗ ಎಸ್.ಟಿ. ಸೋಮಶೇಖರ್ ಬೆಂಬಲಿಗರಾದ ಎಚ್.ವಿ. ರಾಜೀವ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಸ್.ಟಿ. ಸೋಮಶೇಖರ್ ಭಾವಚಿತ್ರ ರಾರಾಜಿಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net