ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಸಭೆ

Published on

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲೆ ಬಂಟ್ವಾಳ ವಲಯದ 25ನೇ ವಾರ್ಷಿಕ ಸಭೆ ಬಿ.ಸಿ.ರೋಡಿನಲ್ಲಿ ವಲಯದ ಅಧ್ಯಕ್ಷ ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ವಾರ್ಷಿಕ ಸಭೆ ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಸಂಚಾಲಕ ಕರುಣಾಕರ ಕಾಣಂಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಬಂಟ್ವಾಳ್, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಎನ್., ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಕೋಶಾಧಿಕಾರಿ ನವೀನ್ ರೈ ಪಂಜಳ, ಎಸ್‌ಕೆಪಿ ವಿವಿಧೋದ್ದೇಶ ಸ.ಸಂ.ನಿ.ದ ನಿರ್ದೇಶಕ ಹರೀಶ್ ರಾವ್, ವಲಯದ ಗೌರವಾಧ್ಯಕ್ಷ ಹರೀಶ್ ಕುಂದರ್, ಪ್ರ.ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಕೋಶಾಧಿಕಾರಿ ವರುಣ್ ಕಲ್ಲಡ್ಕ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ವಾರ್ಷಿಕ ವರಧಿ ವಾಚಿಸಿದರು. ಕೋಶಾಧಿಕಾರಿ ವರುಣ್ ಕಲಡ್ಕ ಲೆಕ್ಕಪತ್ರ ಮಂಡಿಸಿದರು. 2023-24ನೇ ಸಾಲಿನ ಶೆಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ನೀಡಿ ಗೌರವಿಸಲಾಯಿತು. ಹರೀಶ್ ಕುಂದರ್ ಸ್ವಾಗತಿಸಿ, ಯೋಗೀಶ್ ಮೊಗರ್ನಾಡ್ ವಂದಿಸಿದರು. ರಾಜೇಂದ್ರ ಕೆ. ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net