ಫೋಟೊಗ್ರಫಿ, ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ದೇವಗಿರಿಯ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18ರಿಂದ 45 ವರ್ಷದೊಳಗಿರಬೇಕು. ಜಾತಿ ಮತ್ತು ಆದಾಯ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಬಿಪಿಎಲ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ತರಬೇಕು. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿರುತ್ತದೆ. ಆಸಕ್ತರು ಮೇ 30ರೊಳಗೆ ಅರ್ಜಿ ಸಲ್ಲಿಸಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net