PHOTOS| ಆಟೋ ಮೇಲೆ ಉರುಳಿದ ಬೃಹದಾಕಾರದ ಮರ

WhatsApp Image 2020-08-31 at 7.59.14 AM
Published on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿ ವೇಳೆ ಸುರಿದ ಗಾಳಿ ಮಳೆಯ‌ ಅಬ್ಬರಕ್ಕೆ ಕೆಲವೆಡೆ ಮರಗಳು ನೆಲಕ್ಕೆ ಉರುಳಿವೆ. ಕಾಟನ್ ಪೇಟೆಯ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬೆಳಗ್ಗೆ 6.40ಕ್ಕೆ ಸಂಚರಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಉರುಳಿದೆ.

ಆಟೋದಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರು ಇದ್ದರು. ಹೊಯ್ಸಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಅವರನ್ನು ರಕ್ಷಿಸಿದ್ದಾರೆ. ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಕಾರಣ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕೂಡಲೇ ರಸ್ತೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ಮಾಡಲಾಗಿದ್ದು, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2020-08-31 at 7.59.18 AM
WhatsApp Image 2020-08-31 at 7.59.19 AM (1)

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿ ವೇಳೆ ಸುರಿದ ಗಾಳಿ ಮಳೆಯ‌ ಅಬ್ಬರಕ್ಕೆ ಕೆಲವೆಡೆ ಮರಗಳು ನೆಲಕ್ಕೆ ಉರುಳಿವೆ. ಕಾಟನ್ ಪೇಟೆಯ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬೆಳಗ್ಗೆ 6.40ಕ್ಕೆ ಸಂಚರಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಉರುಳಿದೆ.

ಆಟೋದಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರು ಇದ್ದರು. ಹೊಯ್ಸಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಅವರನ್ನು ರಕ್ಷಿಸಿದ್ದಾರೆ. ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಕಾರಣ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕೂಡಲೇ ರಸ್ತೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ಮಾಡಲಾಗಿದ್ದು, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net