ಬೆಟ್ಟದತುಂಗದಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ

03BTP01
Published on

ಬೆಟ್ಟದಪುರ : ಭಾರತದ ಮೊಟ್ಟ ಮೊದಲ ಶಿಕ್ಷಕಿ ಎಂದೇ ಖ್ಯಾತರಾಗಿರುವ ಸಾವಿತ್ರಿಬಾಯಿ ಫುಲೆ ಅವರು ದೇಶಕ್ಕೇ ಮಾದರಿಯಾಗಿದ್ದಾರೆ ಎಂದು ಬೆಟ್ಟದತುಂಗ ಸರ್ಕಾರಿ ಪ್ರೌಢಶಾಲೆ ಹಿರಿಯ ಶಿಕ್ಷಕ ಬಿ.ಗಣೇಶ ಹೇಳಿದರು. ಮಹಿಳೆಯರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಬಿ ಆಗಲು ಹೋರಾಟ ಮಾಡಬೇಕು. ಮಹಿಳೆಯರಿಗೆ ಅಕ್ಷರ ಜ್ಞಾನ ಅವಶ್ಯವಾಗಿರಬೇಕು ಎಂದು ಪ್ರತಿಪಾದಿಸಿದ್ದ ಅವರು, ಬಾಲ್ಯ ವಿವಾಹ, ಸತಿ ಸಹಗಮನ, ಜಾತಿ ಪದ್ಧತಿ ವಿರುದ್ಧ ಹೋರಾಟ ಮಾಡಿದ್ದರು. ಮಹಿಳೆಯರಿಗಾಗಿ ಪ್ರತ್ಯೇಕ ಶಾಲೆಗಳನ್ನು ಸ್ಥಾಪಿಸಿದ ಕೀರ್ತಿ ಸಾವಿತ್ರಿ ಬಾಯಿ ಫುಲೆ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಮುಖ್ಯಶಿಕ್ಷಕ ಟಿ.ರಾಮಚಂದ್ರ, ಶಿಕ್ಷಕರಾದ ಸುರೇಶ ನಾಯಕ್, ವಿ.ಮೋಹನ್, ಕುಮಾರ, ಕೆ.ಆರ್.ಯಶವಂತ, ಎ.ಕಾಂತರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net