ವಿದ್ಯಾರ್ಥಿನಿಯರ ದೇಹ ಸ್ಪರ್ಶಿಸಿ ಕಿರುಕುಳ

Sexual harassement
ಸಾಂದರ್ಭಿಕ ಚಿತ್ರ
Published on

ಕಾಸರಗೋಡು: ಇಬ್ಬರು ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆದೂರು ಕುಂಡಲ ನಾವುಂಗಾಲ್ ನಿವಾಸಿ ನಾಗೇಶ್ ಕೆ.(42)ಎಂಬಾತನನ್ನು ಆದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮ್ಮ ದೇಹ ಸ್ಪರ್ಶಿಸಿ ಕಿರುಕುಳ ನೀಡಿರುವ ಬಗ್ಗೆ ವಿದ್ಯಾರ್ಥಿನಿಯರಿಬ್ಬರು ತಮ್ಮ ಶಾಲಾ ಶಿಕ್ಷಕಿಯಲ್ಲಿ ದೂರಿದ್ದು, ಈ ಬಗ್ಗೆ ಶಿಕ್ಷಕಿ ಚೈಲ್ಡ್‌ಲೈನ್ ಅಧಿಕಾರಿಗಳಿಗೆ ನೀಡಿದ ಮಾಹಿತಿಯನ್ವಯ ಅವರು ಆದೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net