ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಸಮತೋಲನ

Published on

ಕುಂದಾಪುರ: ಭಾರತೀಯ ಪರಂಪರೆಯಲ್ಲಿ ಯೋಗಾಭ್ಯಾಸಕ್ಕೆ ಮಹತ್ವದ ಸ್ಥಾನ ನೀಡಲಾಗಿದ್ದು, ಹಲವಾರು ಪ್ರಯೋಜನಗಳೊಂದಿಗೆ ಸರ್ವವ್ಯಾಪಿಯಾಗಿ ಬೆಳೆದು ನಿಂತಿದೆ. ನಿತ್ಯ ಯೋಗಾಭ್ಯಾಸದಿಂದ ದೇಹ, ಮನಸ್ಸು ಪ್ರಪುಲ್ಲಗೊಳ್ಳುತ್ತದೆ. ದೇಹ, ಮನಸ್ಸುಗಳ ಮಧ್ಯೆ ಸಮತೋಲನ ಸಾಧಿಸಿದಾಗ ಮಾತ್ರ ಮಾನವ ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಈಶಾ ಫೌಂಡೇಶನ್ ಸದ್ಗುರು ಗುರುಕುಲಂನ ಶಾಸ್ತ್ರೀಯ ಹಠ ಯೋಗ ಶಿಕ್ಷಕ ಪ್ರವೀಣ್ ಕುಮಾರ್ ಹೇಳಿದರು.

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಪಾರಂಪರಿಕ ಯೋಗ ಶಿಬಿರದಲ್ಲಿ ಮಾತನಾಡಿದರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪ್ರಾಂಶುಪಾಲ ಶರಣ ಕುಮಾರ ಮಾತನಾಡಿದರು. ಶಿಬಿರದಲ್ಲಿ ಪತಂಗಾಸನ, ಶಿಶುಪಾಲಾಸನ, ನಾಡಿ ವಿಭಜನಾಸನ, ಓಂಕಾರ ಪಠಣ, ಸೂರ್ಯ ಶಕ್ತಿ ಆಸನ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಉಪಪ್ರಾಂಶುಪಾಲ ರಾಮ ದೇವಾಡಿಗ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. * ಫೋಟೋ: 11ಜಿಎಎನ್1 ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಯೋಗ ಶಿಬಿರ ನಡೆಯಿತು. ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಉಪಪ್ರಾಂಶುಪಾಲ ರಾಮ ದೇವಾಡಿಗ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net