ದೈಹಿಕ ಅರ್ಹತಾ ಪರೀಕ್ಷೆ ಮುಂದೂಡಿಕೆ

02
Published on

ಬೆಳಗಾವಿ: ಕರೊನಾ ವೈರಸ್ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಮಾ. 20ರಂದು ನಡೆಸಲಾಗುತ್ತಿದ್ದ ವಿವಿಧ ಹುದ್ದೆಗಳ ದೈಹಿಕ ಅರ್ಹತಾ ಪರೀಕ್ಷೆಯನ್ನು ಪೊಲೀಸ್ ಇಲಾಖೆ ಮುಂದೂಡಿದೆ.

ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪೊಲೀಸ್ ಕಮಿಷನರೇಟ್ ಬೆಳಗಾವಿ ನಗರ ಘಟಕದ ಅರ್ಹ 75 ಅಭ್ಯರ್ಥಿಗಳಿಗೆ ಮಾ. 20ರಂದು ಪಿಎಸ್‌ಟಿ ಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಕರೊನಾ ವೈರಸ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net