ದೈಹಿಕ ಶಿಕ್ಷಕ ಹುದ್ದೆ ಭರ್ತಿಗೆ ಕ್ರಮ

SCHOOL
ಸಿಂಧನೂರಿನಲ್ಲಿ ಗುರುವಾರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿದರು. ಬಿಇಒ ಸೋಮಶೇಖರಗೌಡ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ತಹಸೀಲ್ದಾರ್ ಅರುಣ ದೇಸಾಯಿ, ಸಂಕೇತ ಕಾಲೇಜ್ ಕಾರ್ಯದರ್ಶಿ ಅನಿಲರಾಜ್, ಎಎಸ್‌ಐ ಬಸಪ್ಪ ಇದ್ದರು.
Published on

ಸಿಂಧನೂರು: ಶಿಕ್ಷಣ ಕ್ಷೇತ್ರದಲ್ಲಿ ಈ ಭಾಗ ಹಿಂದುಳಿದಿದೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಅವಶ್ಯಕತೆಯಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಕೂಟ

ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಅಭಿವೃದ್ಧಿ ಯೋಜನೆ ರೂಪಿಸಲು ಮುಂದಾಗಲಾಗಿದೆ. ಸ್ಥಳೀಯ ಪ್ರತಿಭೆಗಳು ಈಗಾಗಲೇ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಅಭಿನಂದನಾರ್ಹ.

ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳಿಗೂ ಅನುದಾನ ಒದಗಿಸಲು ಸರ್ಕಾರ ಮಟ್ಟದಲ್ಲಿ ಒತ್ತಾಯಿಸಲಾಗಿದೆ. ಕ್ರೀಡಾಭಿವೃದ್ಧಿ ನಿಟ್ಟಿನಲ್ಲಿ ಸರ್ಕಾರಿ ಶಾಲೆಯಲ್ಲಿ ಖಾಲಿ ಇರುವ ದೈಹಿಕ ಶಿಕ್ಷಕರು, ಮೈದಾನದ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆ ಅನಾವರಣಕ್ಕೆ ಕ್ರೀಡಾಕೂಟಗಳು ಪೂರಕ. ವಿಜ್ಞಾನ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ನಮ್ಮ ಪ್ರತಿಭೆಗಳು ಅರಳಿವೆ ಎಂದರು.

ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ತಹಸೀಲ್ದಾರ್ ಅರುಣ ದೇಸಾಯಿ, ಸಂಕೇತ ಕಾಲೇಜ್ ಕಾರ್ಯದರ್ಶಿ ಅನಿಲರಾಜ್, ಎಎಸ್‌ಐ ಬಸಪ್ಪ, ಸಿಆರ್‌ಪಿ ಸಂಘದ ಅಧ್ಯಕ್ಷ ಬಸವರಾಜ, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ವಿಠ್ಠಲ್, ನಾಗಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕ ವಿಜಯ ರಂಗಾರೆಡ್ಡಿ, ಅಕ್ಷರ ದಾಸೋಹ ಕಾರ್ಯಕ್ರಮ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರ್, ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net