ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ತೋಟಕ್ಕೆ ಪಲ್ಟಿ

accident-15
Published on

ಸುಳ್ಯ: ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿ, ಚಾಲಕ ಸೇರಿದಂತೆ ಐವರು ಗಾಯಗೊಂಡ ಘಟನೆ

ಸಂಪಾಜೆ ಗ್ರಾಮದ ಕುಂಟಿಕಾನದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಮಹಮ್ಮದ್ ಇಸ್ಮಾಯಿಲ್ ಅವರು ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವ ವೇಳೆ ಕುಂಟಿಕಾನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಇಸ್ಮಾಯಿಲ್ ಸೇರಿದಂತೆ ಐವರು ಕೆಲಸದಾಳುಗಳಿಗೆ ಗಾಯಗಳಾಗಿವೆ. ಸ್ಥಳೀಯರು ಸೇರಿ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net