ಮ. ಬೆಟ್ಟದಲ್ಲಿ ಕಾಡು ಹಂದಿಗಳ ಸೆರೆ

30 HANUR 5
Published on

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿದ್ದ ಕಾಡು ಹಂದಿಗಳನ್ನು ಭಾನುವಾರ ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ವಿವಿಧ ಪೂಜೆ, ಉತ್ಸವ ಅಂಗವಾಗಿ ಮ.ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿ 70ಕ್ಕೂ ಹೆಚ್ಚು ಕಾಡು ಹಂದಿ ಸೆರೆಹಿಡಿಯಲಾಯಿತು. ವಿವಿಧ ಸ್ಥಳಗಳಿಂದ ಆಗಮಿಸುವ ಸಾವಿರಾರು ಭಕ್ತರು ದೇಗುಲ ಆವರಣದ ರಂಗಮಂದಿರ, ಪ್ರಾಕಾರ ಹಾಗೂ ಇನ್ನಿತರೆ ಕಡೆಗಳಲ್ಲಿ ತಂಗುತ್ತಾರೆ. ಇತ್ತೀಚಿಗೆ ಕ್ಷೇತ್ರದಲ್ಲಿ ಕಾಡು ಹಂದಿಗಳ ಹಾವಳಿ ತೀವ್ರ ಹೆಚ್ಚಾಗಿತ್ತು. ಎಲ್ಲೆಂದರಲ್ಲಿ ಅಡ್ಡಾಡುತ್ತಿದ್ದವು. ಭಕ್ತರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದವು. ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಜನ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಪ್ರಾಧಿಕಾರ ಮುತುರ್ವಜಿ ವಹಿಸಿ ಅರಣ್ಯ ಇಲಾಖೆಯ ಸಹಕಾರ ಪಡೆದು ಸೆರೆ ಹಿಡಿದ ಹಂದಿಗಳನ್ನು ದೂರದ ಕಾಡಿಗೆ ಬಿಟ್ಟಿದ್ದಾರೆ. ಇದರಿಂದ ಭಕ್ತರು ನಿಟ್ಟುಸಿರು ಬಿಟ್ಟಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net