873 ಮನೆಗೆ ಕಾವೇರಿ ನೀರು ಪೂರೈಕೆ: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

Pipeline work started mandya
Published on

ಮಂಡ್ಯ: ಮಾರಗೌಡನಹಳ್ಳಿ ಗ್ರಾಮದ 873 ಮನೆಗೆ ಕಾವೇರಿ ನೀರು ಪೂರೈಕೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ತಾಲೂಕಿನ ಮಾರಗೌಡನಹಳ್ಳಿಯಲ್ಲಿ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ 2023-24ನೇ ಸಾಲಿನ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಶ್ರೀರಂಗಪಟ್ಟಣದಿಂದ ಗ್ರಾಮಕ್ಕೆ ಕಾವೇರಿ ನದಿ ನೀರನ್ನು ಪೈಪ್‌ಲೈನ್ ಮೂಲಕ ಸರಬರಾಜು ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ. ಅಂತೆಯೇ ಗ್ರಾಮದ ವಿವಿಧ ದೇವಾಲಯ ಮತ್ತು ರಸ್ತೆಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಅನುದಾನ ನೀಡಲಾಗುವುದು. ಈ ಮೂಲಕ ಮೂಲ ಸೌಕರ್ಯಗಳ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಪಿಡಿಒ ವಿನುತಾ, ಮುಖಂಡರಾದ ಸುದರ್ಶನ್, ಪುಟ್ಟರಾಜು, ಲೋಕೇಶ್, ಹರ್ಷಿತ್, ಸಿದ್ದಲಿಂಗ, ರೇಣುಕುಮಾರ್, ರಾಮಚಂದ್ರ, ಗುತ್ತಿಗೆದಾರ ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net