ರಾಜ್ಯದಲ್ಲಿ 12 ಕ್ಷೇತ್ರಗಳಲ್ಲಿ ಸ್ಪರ್ಧೆ

prahar
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರಾಜ್ಯದ 12 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಹಾರ ಜನಶಕ್ತಿ ಪಕ್ಷ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರವೀಣ ಚೌಧರಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಕ್ಷೇತ್ರದ ಅಭ್ಯರ್ಥಿಯಾಗಿ ಟಾಕಪ್ಪ ಕಲಾಲ ಏ. 18ರಂದು ನಾಮಪತ್ರ ಸಲ್ಲಿಸುವರು. ಬೆಂಗಳೂರು ಉತ್ತರ ಕ್ಷೇತ್ರದಿಂದ ಈಗಾಗಲೇ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಬಳ್ಳಾರಿ, ದಾವಣಗೆರೆ, ಬೆಳಗಾವಿ, ಬಾಗಲಕೋಟ, ವಿಜಯಪುರ, ಕಲಬುರಗಿ ಹಾಗೂ ಬೀದರ್ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ. ರಾಯಚೂರು, ಹಾವೇರಿ ಹಾಗೂ ಕೊಪ್ಪಳ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದರು.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಆಡಳಿತದಿಂದ ಈ ನಾಡಿನ ಜನ ಬೇಸತ್ತಿದ್ದಾರೆ. ಪರಸ್ಪರ ಆರೋಪ ಮಾಡುವುದರಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ. ಅಭಿವೃದ್ಧಿಯನ್ನೇ ಮರೆತಿರುವುದರಿಂದ ಈ ನಾಡಿನ ಜನ ಪರ್ಯಾಯ ಪಕ್ಷಕ್ಕಾಗಿ ಕಾತುರರಾಗಿದ್ದಾರೆ. ಪ್ರಹಾರ ಜನಶಕ್ತಿ ಪಕ್ಷವೇ ಮುಂದಿನ ದಿನಗಳಲ್ಲಿ ನಾಡಿನ ಜನರಿಗೆ ಪರ್ಯಾಯವಾಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶರಣಬಸವ ಹಿರೇಮಠ, ಮುಕ್ತಿಯಾರ ಖಾಜಿ, ಯಲ್ಲೇಶ ಅಳಗವಾಡಿ ಹಾಗೂ ಚನ್ನಪ್ಪ ಬಡಿಗೇರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net