

ಹನೂರು: ಪಟ್ಟಣದ ರಾಮಮಂದಿರಲ್ಲಿ ಬುಧವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀರಾಮನವಮಿ ಆಚರಿಸಲಾಯಿತು.
ರಾಮನವಮಿ ಹಿನ್ನೆಲೆ ದೇಗುಲವನ್ನು ತಳಿರು-ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದೇವರ ದರ್ಶನ ಪಡೆಯುವ ಮೂಲಕ ರಾಮನ ಜಪ ಮಾಡಿದರು.
ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿ ಒಕ್ಕಲಿಗ ಸಮುದಾಯದ ಯುವಕರು ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಿಸಲಾಯಿತು.