ಕೃಷಿಕರನ್ನು ಒಕ್ಕಲೆಬ್ಬಿಸುವ ಹುನ್ನಾರ

ಹಗರಿಬೊಮ್ಮನಹಳ್ಳಿಯಲ್ಲಿ ರೈತರ ಜಿಲ್ಲಾಮಟ್ಟದ ಸಮಾವೇಶದಲ್ಲಿ ರೈತಪರ ಹಕ್ಕೊತ್ತಾಯ ಪತ್ರಗಳನ್ನು ಪ್ರದರ್ಶಿಸಲಾಯಿತು. ಸಂಘದ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ, ನಂದಿಪುರ ಮಠದ ಡಾ.ಮಹೇಶ್ವರ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ಧೇಶ್ವರ ಸ್ವಾಮೀಜಿ, ಸಾಹಿತಿ ಹುರುಕಡ್ಲಿ ಶಿವಕುಮಾರ್, ಎಂ.ಡಿ.ವಸಂತಕುಮಾರ್, ಬಿ.ಸಿದ್ದನಗೌಡ ಇತರರಿದ್ದರು.
ಹಗರಿಬೊಮ್ಮನಹಳ್ಳಿಯಲ್ಲಿ ರೈತರ ಜಿಲ್ಲಾಮಟ್ಟದ ಸಮಾವೇಶದಲ್ಲಿ ರೈತಪರ ಹಕ್ಕೊತ್ತಾಯ ಪತ್ರಗಳನ್ನು ಪ್ರದರ್ಶಿಸಲಾಯಿತು. ಸಂಘದ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ, ನಂದಿಪುರ ಮಠದ ಡಾ.ಮಹೇಶ್ವರ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ಧೇಶ್ವರ ಸ್ವಾಮೀಜಿ, ಸಾಹಿತಿ ಹುರುಕಡ್ಲಿ ಶಿವಕುಮಾರ್, ಎಂ.ಡಿ.ವಸಂತಕುಮಾರ್, ಬಿ.ಸಿದ್ದನಗೌಡ ಇತರರಿದ್ದರು.
Published on

ಹಗರಿಬೊಮ್ಮನಹಳ್ಳಿ: ದೇಶದಲ್ಲಿ ರೈತರನ್ನು ಗುರಿಯಾಗಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಆರೋಪಿಸಿದರು.

ಪಟ್ಟಣದ ಬಸವೇಶ್ವರ ಬಜಾರದ ವೀರಶೈವ ಕಲ್ಯಾಣಮಂಟಪದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ ರೈತರ ಜಿಲ್ಲಾಮಟ್ಟದ ಸಮಾವೇಶದಲ್ಲಿ ಮಾತನಾಡಿದರು. ಕೃಷಿ ಕ್ಷೇತ್ರವನ್ನು ಕಿತ್ತುಕೊಳ್ಳುವ ಮೂಲಕ ರೈತರನ್ನು ಒಕ್ಕಲೆಬ್ಬಿಸಿ ಬಂಡವಾಳಶಾಹಿಗಳು ಮೆರೆಯುವ ಹುನ್ನಾರ ನಡೆಸಿದ್ದಾರೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆಯನ್ನು ವಿರೋಧಿಸುತ್ತೇವೆ ಎಂದರು.

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಾಪುರ ನಾಗೇಂದ್ರ ಮಾತನಾಡಿ, ರೈತ ವಿರೋಧಿ ಕಾಯ್ದೆಗಳನ್ನು ಕೂಡಲೆ ಕೈಬಿಡಬೇಕು. ರೈತರಿಗೆ ಅನುಕೂಲವಾಗುವ ಯೋಜನೆ ಜಾರಿಗೊಳಿಸಬೇಕು. ದೆಹಲಿಯಲ್ಲಿ ನಡೆದ ರೈತರ ಹೋರಾಟದಲ್ಲಿ ಕೇಂದ್ರ ಸರ್ಕಾರ ನೀಡಿದ ಭರವಸೆಗಳನ್ನು ಕೂಡಲೆ ಅನುಷ್ಠಾನಕ್ಕೆ ತರಬೇಕು ಎಂದರು.

ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಬಾರದು. ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಗೊಳಿಸಬೇಕು. ಕೃಷಿ ಸಾಲ ಮನ್ನಾ ಮಾಡಬೇಕು. 60 ವರ್ಷ ವಯಸ್ಸಿನ ರೈತರಿಗೆ ಮಾಸಿಕ 5 ಸಾವಿರ ರೂ. ಪಿಂಚಣಿ ನೀಡಬೇಕು. ದೆಹಲಿ ಹೋರಾಟದ ಬೇಡಿಕೆಗಳನ್ನು ಈಡೇರಿಸಬೇಕು ಎನ್ನುವ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ನಂದಿಪುರ ಮಠದ ಡಾ.ಮಹೇಶ್ವರ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ಹಿರಿಯ ಸಾಹಿತಿ ಹುರುಕಡ್ಲಿ ಶಿವಕುಮಾರ್, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ವಸಂತಕುಮಾರ್, ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಕಾರ್ಯದರ್ಶಿ ಗೋಪಾಲ್ ಪಾಪೇಗೌಡ, ಖಜಾಂಚಿ ಎ.ಆಂಜನೇಯಲು, ವಿಭಾಗೀಯ ಕಾರ್ಯದರ್ಶಿ ಎಂ.ಎಲ್.ಕೆ.ನಾಯ್ಡು. ತಾಲೂಕು ಅಧ್ಯಕ್ಷ ಹರಟೆ ಕಾಳಪ್ಪ, ಪ್ರಮುಖರಾದ ರವಿ ತಂಬ್ರಹಳ್ಳಿ, ಸಿ.ಭೀಮ್ಸಿ, ಬಾಣದ ಶಿವಪ್ಪ, ಮಾಬುಸಾಬ್, ಜಿ.ಲಕ್ಷ್ಮಿಪತಿ, ಹನಸಿ ಸಿದ್ದೇಶ, ಬಾಬಣ್ಣ ಕಠಾರೆ, ಪಂಪನಗೌಡ್ರು, ಒಪ್ಪತೇಶ, ಬಸನಗೌಡ್ರು, ಹಲಿಗೇರಿ ಮಹೇಶಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net