

ಚಾಮರಾಜನಗರ: ಪ್ರಧಾನಿ ಮೋದಿ ಅವರು ಜಾರಿಗೆ ತಂದ ಜನಪ್ರಿಯ ಯೋಜನೆ ಹಾಗೂ ಸಾಧನೆಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸುವ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಗುಂಡ್ಲುಪೇಟೆ ಶಾಸಕ ನಿರಂಜನ್‌ಕುಮಾರ್ ತಿಳಿಸಿದರು.
ಪ್ರತಿ ಫಲಾನುಭವಿಯೂ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಬೇಕು. ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ನಗರದ ಕರಿನಂಜನಪುರದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇಶವನ್ನು ಮೋದಿ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಾರೆ ಎಂಬ ನಂಬಿಕೆ ಮೇಲೆ ಜನರು ಎರಡನೇ ಬಾರಿಗೆ ಅವಕಾಶ ನೀಡಿದ್ದಾರೆ. ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗದವರಿಗೂ ಯೋಜನೆಯನ್ನು ಜಾರಿಗೆ ತಂದಿದ್ದು, ಅದನ್ನು ಜನಸಾಮಾನ್ಯರಿಗೆ ತಿಳಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
ಕರೊನಾ ಹೋರಾಟದಲ್ಲಿ ಒಳ್ಳೆಯ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಭಾರತ ವಿಶ್ವದ ಗಮನ ಸೆಳೆದಿದೆ. ಇದು ಮೋದಿಯವರ ಆಡಳಿತ ವೈಖರಿಯಾಗಿದೆ ಎಂದರು.
ಕೆಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮವನ್ನು ಅಯೋಜಿಸಲಾಗಿದ್ದು, ಮೇ 14ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಆರ್.ಸುಂದರ್, ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ, ಗುರುಸ್ವಾಮಿ ಸುದ್ದಿಗೋಷ್ಠಿಯಲಿದ್ದರ