ಯೋಜನೆಗಳ ಮಾಹಿತಿ ನೀಡಿ

21manju5-Web
ಬೆಳಗಾವಿ ಬಿಜೆಪಿ ಗ್ರಾಮಾಂತ ಜಿಲ್ಲಾ ಕಚೇರಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರನ್ನು ಅಧ್ಯಕ್ಷ ಸಂಜಯ ಪಾಟೀಲ, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಸನ್ಮಾನಿಸಿದರು. ಡಾ.ಗುರು ಕೋತಿನ, ಮಲ್ಲಿಕಾರ್ಜುನ ಮಾದಮ್ಮನವರ, ದಿನೇಶ ಪಾಟೀಲ ಇತರರು ಉಪಸ್ಥಿತರಿದ್ದರು.
Published on

ಬೆಳಗಾವಿ: ಕೋವಿಡ್-19 ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಸಲಹೆ ನೀಡಿದರು.

ನಗರದ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಚೇರಿಗೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಮಧ್ಯಮ, ಬಡವರಿಗೆ ಹಾಗೂ ಕಾರ್ಮಿಕರಿಗೆ ಸಾಕಷ್ಟು ಆರೋಗ್ಯ ಯೋಜನೆ ಜಾರಿ ಗೊಳಿಸಲಾಗಿದೆ. ಈ ಕುರಿತು ಜನರಿಗೆ ಮನವರಿಕೆ ಮಾಡಲು ಕಾರ್ಯಕರ್ತರು ಮುಂದಾಗಬೇಕು ಎಂದರು. ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ, ಪ್ರಧಾನ ಕಾರ್ಯದರ್ಶಿ ಮಹೇಶ ಮೋಹಿತೆ, ಸುಭಾಷ ಪಾಟೀಲ, ಹೇಮಂತ ಪಾಟೀಲ, ಕಾಚು ಸಾವಂತ, ಡಾ.ಗುರು ಕೋತಿನ, ಡಾ.ಸೋನಾಲಿ ಸರ್ನೋಬತ್, ರಂಜನಾ ಕೋಲಕಾರ, ಮಲ್ಲಿಕಾರ್ಜುನ ಮಾದಮ್ಮನವರ, ದಿನೇಶ ಪಾಟೀಲ ಹಾಗೂ ಕಾರ್ಯಕರ್ತರು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net