ಕೋಟತಟ್ಟು ಪಂಚಾಯಿತಿಗೆ ಯೋಜನಾಧಿಕಾರಿ ಭೇಟಿ

kotathattu
ಕೋಟತಟ್ಟು ಗ್ರಾಮ ಪಂಚಾಯಿತಿಗೆ ಜಿಪಂ ಯೋಜನಾಧಿಕಾರಿ ಡಾ.ಉದಯ್ ಶೆಟ್ಟಿ ಭೇಟಿ ನೀಡಿದರು
Published on

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಯೋಜನಾಧಿಕಾರಿ ಡಾ.ಉದಯ್ ಶೆಟ್ಟಿ ಗುರುವಾರ ಭೇಟಿ ನೀಡಿದರು.

ಗ್ರಾಮ ಪಂಚಾಯಿತಿಯ ವಿವಿಧ ದಾಖಲೆಗಳು, ಎಸ್‌ಎಲ್‌ಆರ್‌ಎಂ ಘಟಕ, ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಾಗೂ ಚಿಟ್ಟಿಬೆಟ್ಟು ಕೊರಗ ಕಾಲನಿಯಲ್ಲಿ ಹೊಸ ಮನೆಯ ನಿರ್ಮಾಣದ ಕಾಮಗಾರಿ ವೀಕ್ಷಿಸಿ ಶ್ಲಾಘಿಸಿದರು. ಕೋಟತಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಯೋಜನಾಧಿಕಾರಿಯನ್ನು ಗೌರವಿಸಲಾಯಿತು. ಗ್ರಾಪಂ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದ ವಾಸು ಪೂಜಾರಿ, ಸೀತಾ, ಪಿಡಿಒ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net