ಮನೆಗೊಂದು ಗಿಡ ನೆಟ್ಟು ಪೋಷಿಸಿ

31bhr 7
ಬಾಳೆಹೊನ್ನೂರಿನ ರುದ್ರಮುನೀಶ್ವರ ವಸತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಆದಿತ್ಯರಾವ್, ಜಾಹ್ನವಿ, ವೈಶಾಲಿ ಕುಡ್ವ, ಸುಜಾತ ಇದ್ದರು.
Published on

ಬಾಳೆಹೊನ್ನೂರು: ವಿದ್ಯಾರ್ಥಿಗಳು ಪರಿಸರದ ಕುರಿತು ಕಾಳಜಿ ಹೊಂದಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಡಿಆರ್‌ಎಫ್‌ಒ ಆದಿತ್ಯ ರಾವ್ ಹೇಳಿದರು.
ರಂಭಾಪುರಿ ಪೀಠದ ಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢಶಾಲೆಯಲ್ಲಿ ಮಂಗಳವಾರ ಇನ್ನರ್‌ವ್ಹೀಲ್ ಕ್ಲಬ್ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಉತ್ತಮ ಪರಿಸರ ಸಂರಕ್ಷಣೆ ಮಾಡಿದಲ್ಲಿ ಮಾತ್ರ ಮುಂದಿನ ಪೀಳಿಗೆಗೆ ನಾವು ಉತ್ತಮ ಕೊಡುಗೆ ನೀಡಲು ಸಾಧ್ಯ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕಿರಿಯ ವಯಸ್ಸಿನಲ್ಲಿಯೇ ಪರಿಸರದ ಕುರಿತು ಕಾಳಜಿ ಇಟ್ಟುಕೊಂಡು ಮನೆಗೊಂದು ಗಿಡ ನೆಟ್ಟು ಪೋಷಿಸಬೇಕು ಎಂದರು.
ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಜಾಹ್ನವಿ ಜಯರಾಮ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಇನ್ನರ್‌ವ್ಹೀಲ್ ಸಂಸ್ಥೆಯ ವತಿಯಿಂದ ಪರಿಸರ ದಿನ, ಜಾಗೃತಿ ಕಾರ್ಯಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಇನ್ನರ್‌ವ್ಹೀಲ್ ಕ್ಲಬ್ ಜಿಲ್ಲಾ ಚೇರ್ಮನ್ ವೈಶಾಲಿ ಕುಡ್ವ, ಕಾರ್ಯದರ್ಶಿ ಸವಿತಾ, ಅರಣ್ಯ ಪಾಲಕ ಪ್ರಭು, ಮುಖ್ಯಶಿಕ್ಷಕಿ ಸುಜಾತ ಅಳವಂಡಿ, ಶಿಕ್ಷಕ ಕಟ್ಟೇಗೌಡ, ಇನ್ನರ್‌ವ್ಹೀಲ್ ಸದಸ್ಯರಾದ ವಿದ್ಯಾಶೆಟ್ಟಿ, ಪಲ್ಲವಿ, ಸೀಮಾ, ತಾಹಿರಾ, ಕವಿತಾ, ವಿದ್ಯಾ ಪೈ, ಸವಿತಾ, ಸಾಂಚಿತಾ, ಪ್ರೀತ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net