ಜಾನುವಾರುಕಟ್ಟೆ ಶಾಲೆಯಲ್ಲಿ ಗಿಡ ವಿತರಣೆ

kon
Published on

ಕೊಕ್ಕರ್ಣೆ: ಅಂತಾರಾಷ್ಟ್ರೀಯ ಸಹಕಾರಿ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಶಿರೂರು ಮೂರುಕೈ ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಜಾನುವಾರುಕಟ್ಟೆ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಶಾಲೆಯಲ್ಲಿ ಗಿಡ ನೆಡುವ ಹಾಗೂ ವಿತರಿಸುವ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.

ಶ್ರೀ ಮಲ್ಲಿಕಾರ್ಜುನ ಸೊಸೈಟಿ ಅಧ್ಯಕ್ಷ ಕೃಷ್ಣ ನಾಯ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಉಪಾಧ್ಯಕ್ಷ ಸಿದ್ದಾರ್ಥ್, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಆಚಾರ್ಯ, ಸಲಹೆಗಾರ ಚಂದ್ರಶೇಖರ ಶೆಟ್ಟಿ, ಸಂಪನ್ಮೂಲ ವ್ಯಕ್ತಿ ದಿನಕರ ನಾಯ್ಕ, ಬಿಲ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ, ಮುಖ್ಯಶಿಕ್ಷಕಿ ಕವಿತಾ, ಸಂಘದ ನಿರ್ದೇಶಕರು, ಸಿಬ್ಬಂದಿ, ಪಿಗ್ಮಿ ಸಂಗ್ರಹಕರು, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ನರಸಿಂಹ ನಾಯ್ಕ ಸ್ವಾಗತಿಸಿದರು. ಅಧ್ಯಾಪಕ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net