ಗಿಡ-ಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

05 HANUR 2
ಮಲೆಮಹದೇಶ್ವರ ಬೆಟ್ಟದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಸಸಿ ನೆಟ್ಟು ನಿರೇರೆದರು. ಎ.ಈ ರಘು, ಚಂದ್ರಶೇಖರ್, ಮಹದೇವಸ್ವಾಮಿ, ಸ್ವಾಮಿ, ಜನಾರ್ಧನ್ ಇತರರು ಇದ್ದರು.
Published on

ಹನೂರು: ಪರಿಸರವನ್ನು ನಾವು ಕಾಪಾಡಿದರೆ ಪರಿಸರ ನಮ್ಮನ್ನು ಕಾಪಾಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡ ಮರಗಳನ್ನು ಬೆಳೆಸುವುದರ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬುಧವಾರ ಆಯೋಜಿಸಿದ್ಧ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ನೀರೆರೆದು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು, ದೈಹಿಕ ಶ್ರಮ ಕಡಿಮೆಯಾಗುತ್ತಿದೆ. ಇದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸರ್ವೇ ಸಾಮಾನ್ಯವಾಗಿದೆ. ಆದ್ದರಿಂದ ಆರೋಗ್ಯ ಸದೃಢವಾಗಿರಬೇಕಾದರೆ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕಿದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡ ನೆಟ್ಟು ನೀರುಣಿಸಿ ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸುವುದೇ ಪರಿಸರಕ್ಕೆ ನೀಡುವ ಬಹುದೊಡ್ಡ ಕೊಡುಗೆಯಾಗಿದೆ ಎಂದರು.

ವಾಹನ, ಪ್ಲಾಸ್ಟಿಕ್ ಬಳಕೆ ಹಾಗೂ ಜನಸಂಖ್ಯೆ ಹೆಚ್ಚಾದಂತೆ ಪರಿಸರಕ್ಕೆ ದಕ್ಕೆಯಾಗುತ್ತದೆ. ಇಂದು ಪ್ಲಾಸ್ಟಿಕ್ ಮಾಲಿನ್ಯವು ಪ್ರಪಂಚದಾದ್ಯಂತ ಇರುವ ಒಂದು ದೊಡ್ಡ ಆತಂಕವಾಗಿದೆ. ಇದರಿಂದ ಪರಿಸರ ವ್ಯವಸ್ಥೆಗಳು, ವನ್ಯಜೀವಿ ಹಾಗೂ ಮಾನವನ ಆರೋಗ್ಯದ ಮೇಲೆ ದುಷ್ಪಾರಿಣಾಮವನ್ನು ಬೀರುತ್ತಿದೆ. ಆದ್ದರಿಂದ ಹೆಚ್ಚು ಹೆಚ್ಚು ಗಿಡ-ಮರಗಳನ್ನು ಬೆಳೆಸುವುದರಿಂದ ಶುದ್ಧವಾದ ಆಮ್ಲಜನಕ ಸಿಗುತ್ತದೆ. ಇದರಿಂದ ಆರೋಗ್ಯವೂ ವೃದ್ಧಿಸುತ್ತದೆ. ಜತೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಸ್ಟೋರ್‌ಗಳಿಗೆ ಮೊರೆ ಹೋಗುವುದು ತಪ್ಪುತ್ತದೆ ಎಂದು ತಿಳಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಮಾತನಾಡಿ, ಪ್ರಾಣಿ ಸಂಕುಲಕ್ಕೆ ಪರಿಸರವೇ ಜೀವನಾಧಾರ. ಹಾಗಾಗಿ ಪರಿಸರವನ್ನು ಉಳಿಸಿ ಬೆಳೆಸುವುದರ ಮೂಲಕ ಮುಂದಿನ ಪೀಳಿಗೆಗೆ ರಕ್ಷಿಸಬೇಕು. ಇದು ನಮ್ಮೆಲ್ಲದ ಆದ್ಯ ಕರ್ತವ್ಯವೂ ಹೌದು. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ನೌಕರರಾದ ಮಹದೇವಸ್ವಾಮಿ, ಸ್ವಾಮಿ, ಜನಾರ್ಧನ್, ಮಹೇಶ್, ಶಾಸ್ತ್ರೀ ಹಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net