

ಕಡಬ: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚಾರ್ವಾಕ ಶಾಖಾ ಕಚೇರಿ ಆವರಣದಲ್ಲಿ ಶತಮಾನದ ಸವಿ ನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮ ಮಂಗಳವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ನಿರ್ದೇಶಕರಾದ ಪರಮೇಶ್ವರ ಅನಿಲ, ಅನಂತ ಕುಮಾರ್ ಬೈಲಂಗಡಿ, ವಿಶ್ವನಾಥ ದೇವಿನಗರ, ರಮೇಶ ಉಪ್ಪಡ್ಕ, ಶೀಲಾವತಿ ಮುಗರಂಜ, ರತ್ನಾವತಿ ಮುದುವ, ಲೋಕೇಶ್ ಅತಾಜೆ, ಸುಂದರ ದೇವಸ್ಯ, ದಿವಾಕರ ಮರಕ್ಕಡ, ಪುತ್ತೂರು ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ವಂದಿಸಿದರು. ಸಿಬ್ಬಂದಿ ಸಹಕರಿಸಿದರು.