

ಕಲ್ಕುಂದ: ನಂಜನಗೂಡು ತಾಲೂಕು ಬಿಳಿಗೆರೆ ಹೋಬಳಿ ಸುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೋಮವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯೋಜನೆಯ ತಾಲೂಕು ಕೃಷಿ ಮೇಲ್ವಿಚಾರಕ ಜೈಪಾಲ್ ಮಾತನಾಡಿ, ನಮ್ಮ ಧರ್ಮಸ್ಥಳ ಸಂಸ್ಥೆಯಿಂದ ಪ್ರತಿ ವರ್ಷ ಎರಡು ಸಾವಿರ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದಿನ ಕಾರ್ಯಕ್ರಮ 8ನೆಯದಾಗಿದೆ. ಇಂದು ನೆಡುವ ಒಂದು ಗಿಡ ನಾಳಿನ ದಿನಗಳಲ್ಲಿ ಹೆಮ್ಮರವಾಗಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಇದರಿಂದ ನಮ್ಮ ಸುತ್ತಲಿನ ಪರಿಸರ ಉತ್ತಮವಾಗಲಿದ್ದು, ಭವಿಷ್ಯದ ಪೀಳಿಗೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕ ಬಿ.ನಾಗರಾಜು, ಕೃಷಿ ಮೇಲ್ವಿಚಾರಕ ಜೈಪಾಲ್, ವಲಯ ಮೇಲ್ವಿಚಾರಕಿ ಪ್ರನೀತಾ, ಶಿಕ್ಷಕಿ ಗಗನಾ, ಸೇವಾ ಪ್ರತಿನಿಧಿ ಶ್ರುತಿ, ಕಾವ್ಯಾ, ಶಾಲಾ ಮಕ್ಕಳು ಇದ್ದರು.
ನಂಜನಗೂಡು ತಾಲೂಕಿನ ಸುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯಶಿಕ್ಷಕ ನಾಗರಾಜು, ಜೈಪಾಲ್, ಪ್ರನೀತಾ ಇದ್ದರು.