ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

New Project (5)
Published on

ಬೆಳ್ತಂಗಡಿ: ಬೆಳಾಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ, ಕುಂಡಡ್ಕ ಅರಣ್ಯ ಸಮಿತಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಬುಧವಾರ ನಡೆಯಿತು.

ಹಲಸು, ಮಾವು, ಅಶ್ವಥ, ಹುಣಸೆ, ಕಾಡು ದಾಸವಾಳ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ಗ್ರಾಮ ಅರಣ್ಯ ಸಮಿತಿ ಸದಸ್ಯರು ನಾಟಿ ಮಾಡಿದರು.

ಅರಣ್ಯ ಇಲಾಖೆ ಉಪವಲಯ ಅರಣ್ಯಾಧಿಕಾರಿ ಜೆರಾಲ್ಡ್ ಡಿಸೋಜ, ಗಸ್ತು ಅರಣ್ಯ ಪಾಲಕ ಕೆ.ಎನ್.ಜಗದೀಶ್, ಅರಣ್ಯ ವೀಕ್ಷಕ ಸಂತೋಷ್, ಕುಂಡಡ್ಕ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗಂಗಾಧರ ಗೌಡ, ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಸುರೇಶ್ ಮಾಚಾರ್ ಸ್ವಾಗತಿಸಿದರು. ಶಿಕ್ಷಕರಾದ ದಿನೇಶ್ ಕೆ., ಕರಿಯಣ್ಣ ಗೌಡ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net