ಪರಿಸರ ಜಾಗೃತಿ ಮೂಡಿಸುವುದು ಅತ್ಯಗತ್ಯ: ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ವಿ.ಶೆಟ್ಟಿ ಕರೆ

1 (1)
Published on

ಮಂಡ್ಯ: ಪರಿಸರದ ಬಗ್ಗೆ ಅರಿವು ಮೂಡಿಸುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ವಿ.ಶೆಟ್ಟಿ ತಿಳಿಸಿದರು.

ಇಲ್ಲಿನ ಅನ್ನಪೂರ್ಣೇಶ್ವರಿ ನಗರದ 17ನೇ ಕ್ರಾಸ್‌ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ, ಕಾವೇರಿ ನೀರಾವರಿ ನಿಗಮ, ಮಂಡ್ಯ ಮಧುರ ಲಯನ್ಸ್ ಸಂಸ್ಥೆ, ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಪರಿಸರ ಪ್ರೇಮದ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಮಾಡುವ ಕೆಲಸ ಮಾಡಬೇಕು. ಹೆಚ್ಚು ಗಿಡಗಳನ್ನು ನೆಟ್ಟರೆ ಹೆಚ್ಚು ಮಳೆ ಆಗುತ್ತದೆ ಎಂದು ಹೇಳಿದರು.

ವಲಯ ಅರಣ್ಯಾಧಿಕಾರಿ ಶಂಕರೇಗೌಡ ಮಾತನಾಡಿ, ಗಿಡಮರಗಳ ನಾಶದಿಂದ ಅರಣ್ಯ ಪ್ರದೇಶ ನಾಶವಾಗುತ್ತಿದೆ. ಆಧುನಿಕತೆಯ ಭರದಲ್ಲಿ ಐಷಾರಾಮಿ ಜೀವನ ಸಾಗಿಸಲು ನೀರು, ಆಹಾರ, ಗಾಳಿಯನ್ನು ಸಹ ಕಲುಷಿತಗೊಳಿಸುತ್ತಿದ್ದೇವೆ. ಈ ಕುರಿತು ಜನರಲ್ಲಿ ಪರಿಸರದ ಜಾಗೃತಿ ಜತೆಗೆ ಜನಾಂದೋಲನದೊಂದಿಗೆ ಅರಣ್ಯ ಕ್ಷೇತ್ರ ಹೆಚ್ಚಿಸಬೇಕಾಗಿದೆ ಎಂದು ಹೇಳಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎಂ.ಬಸವರಾಜು, ಉಪಾಧ್ಯಕ್ಷ ಕೆ.ಎಲ್.ಮರಿಸ್ವಾಮಿ, ಮಧುರ ಲಯನ್ಸ್ ಸಂಸ್ಥೆ ಅಧ್ಯಕ್ಷ ಸಿ.ತ್ಯಾಗರಾಜು, ಬೇವಿನಹಳ್ಳಿ ಗ್ರಾಪಂ ಅಧ್ಯಕ್ಷೆ ಸಾಕಮ್ಮ, ಉಪಾಧ್ಯಕ್ಷ ಬಿ.ಎಂ.ಮಹೇಶ್, ಮಾಜಿ ಅಧ್ಯಕ್ಷ ಲೋಕೇಶ್, ಸದಸ್ಯರಾದ ಮಾಲತಿ ಸುರೇಶ್, ಚೌಧರಿ, ಕಾಳೇಗೌಡ, ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ, ಕಿರಿಯ ಇಂಜಿನಿಯರ್ ಜಿ.ಎನ್.ಕೆಂಪರಾಜು, ವಲಯ ಅರಣ್ಯಾಧಿಕಾರಿ ಸುರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net