ಬ್ರಹ್ಮಾವರದಲ್ಲಿ ಗಿಡ ನಾಟಿ

brhmavara
ತಾಲೂಕು ಆಡಳಿತ ನೇತೃತ್ವದಲ್ಲಿ ಗಿಡಗಳನ್ನು ನೆಡಲಾಯಿತು
Published on

ಬ್ರಹ್ಮಾವರ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66 ವ್ಯಾಪ್ತಿಯ 24 ಕಿಮೀ ಮಾನವ ಸರಪಳಿ ನಿರ್ಮಾಣ ಮತ್ತು ಗಿಡ ನೆಡುವ ಕಾರ್ಯಕ್ರಮ ಭಾನುವಾರ ನಡೆಯಿತು. ಒಟ್ಟು 200 ಕಡೆಗಳಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮಾ ಗಾಂಧಿಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಭಾರತ ಸಂವಿಧಾನ ಪೀಠಿಕೆ ವಾಚಿಸಿದರು.

ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ, ತಾಪಂ ಇಒ ಎಚ್.ವಿ ಇಬ್ರಾಹಿಂಪುರ್ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳಕ ಲ್ಯಾಣ ಇಲಾಖೆಯ ಭಾಗೀರಥಿ ಆಚಾರ್ಯ ಮತ್ತು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಇಲಾಖಾ ಮುಖ್ಯಸ್ಥರು ಹಾಜರಿದ್ದರು. ಅರಣ್ಯ ಇಲಾಖೆಯಿಂದ ಹಲವೆಡೆ 200 ಗಿಡಗಳನ್ನು ನೆಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net