ಸಂಘಟಿತರಾದರೆ ಸಮಸ್ಯೆಗಳಿಗೆ ಪರಿಹಾರ ಸುಲಭ

29 Aluru 1
Published on

ಆಲೂರು : ಕಾಫಿ ಬೆಳೆಗಾರರು ಸಂಘಟಿತರಾದಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ತಾಲೂಕಿನ ಸಂಕಲಾಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ, ತಾಲೂಕು ಕಾಫಿ ಬೆಳೆಗಾರರ ಸಂಘ ಮತ್ತು ಪ್ರಕೃತಿ ಸಣ್ಣ ಕಾಫಿ ಬಳಗದ ಸಂಘದ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಾಡಾನೆ ಹಾವಳಿ, ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ, ಕಾರ್ಮಿಕರ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ನಿರಂತರವಾಗಿ ಕೃಷಿ ವಲಯವನ್ನು ಕಾಡುತ್ತಿದೆ. ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಮತ್ತು ರಾಜ್ಯ ಸಂಘಗಳು ನಿರಂತರ ಪ್ರಯತ್ನ ನಡೆಸಿವೆ. ಬೆಳೆಗಾರರು ಸಂಘಟಿತರಾಗುವುದೇ ಉತ್ತರ ಎಂದು ಅವರು ಹೇಳಿದರು.

ಸಂಕ್ಲಾಪುರ ಹಾಗೂ ಕಲ್ಮಠದ ಶ್ರೀ ಧರ್ಮರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲೂಕು ಜೆಡಿಎಸ್ ಅಧ್ಯಕ್ಷ ಮಂಜೇಗೌಡ, ಸಂಕಲಾಪುರ ವೃತ್ತದ ಪ್ರಕೃತಿ ಸಣ್ಣ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಶಶಿಧರ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಿವಣ್ಣ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷ ಪರಮೇಶ, ಕರ್ನಾಟಕ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಂದ್ರ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಗೌರವ ಕಾರ್ಯದರ್ಶಿ ಲೋಹಿತ ಕೌಡಳ್ಳಿ, ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ರವಿಕುಮಾರ ಇತರರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net