

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ಟಕ ನಾಲ್ಕೂರು ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸದಸ್ಯರಿಂದ ಶನಿವಾರ ಕಾಡಿನಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ ನಡೆಯಿತು.
ಜನಜಾಗೃತಿ ವೇದಿಕೆ ಅಧ್ಯಕ್ಷ ಮಿತ್ರದೇವ ಮಾಡಪ್ಪಾಡಿ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ವಿಜಯ ಕುಮಾರ್, ಗ್ರಾಮದ ಅರಣ್ಯ ರಕ್ಷಕ ಬಸಪ್ಪ, ಒಕ್ಕೂಟಗಳ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಕೇಶರಾಜ್ ಹೊಸೋಳಿಕೆ, ತಾಲೂಕು ಶೌರ್ಯ ಟಕದ ಕ್ಯಾಪ್ಟನ್ ಸತೀಶ್ ಬಂಬುಳಿ, ತಾಲೂಕು ಕೃಷಿ ಅಧಿಕಾರಿ ರಮೇಶ್, ಗುತ್ತಿಗಾರು ವಲಯ ಮೇಲ್ವಿಚಾರಕ ರಾಜೇಶ್ ಮೊದಲಾದವರಿದ್ದರು. ನಾಲ್ಕೂರು ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ನಿರೂಪಿಸಿದರು.